ಶಾಸಕರ ಕಾರು, ಬೈಕ್ ಮೇಲೆ ಹರಿದ ಪರಿಣಾಮ 3 ವರ್ಷದ ಬಾಲಕಿ ಸಾವನ್ನಪ್ಪಿ, ಪೋಷಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಲುಗುಲು ಜಿಲ್ಲೆಯ ಜಿದಿವಾಗಾಲೂ ಗ್ರಾಮದಲ್ಲಿ ಸಂಭವಿಸಿದೆ.
ತೆಲಂಗಾಣದ ಶಾಸಕಿ ಧನಸಾರೈ ಅನುಸೂಯ ಅವರಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಸಾಗಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬೈಕ್ ಸ್ಕಿಡ್ ಆದ ಪರಿಣಾಮ 3 ವರ್ಷದ ಬಾಲಕಿ ಶ್ರಾವಂತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಕೆ.ಅರುಣ್ ಹಾಗೂ ಆತನ ಪತ್ನಿ ವಿಜಯಾ ಗಾಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಈತುರಣಗ್ರಾಮದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳೀಯ ಪೊಲೀಸರು ಶಾಸಕಿ ಅನುಸೂಯ ಹಾಗೂ ಚಾಲಕನ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.