ಫಲಿತಾಂಶ ದಿನ ವಿದೇಶಕ್ಕೆ ಡಿಕೆಶಿ : ಜವಾಬ್ದಾರಿಯಿಂದ ಎಸ್ಕೇಪ್ ಆದ್ರಾ ಡಿ ಕೆ ಶಿವಕುಮಾರ್?

Date:

ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಕ್ಕೆ ಇನ್ನೆರಡು ದಿನವಷ್ಟೇ ಬಾಕಿ ಉಳಿದಿದ್ದು, ಪಕ್ಷಗಳು ಕಾತರತೆಯಿಂದ ಕಾಯುತ್ತಿವೆ.

ಇದೇ ಸಂದರ್ಭದಲ್ಲಿ ರಾಜ್ಯದ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಸಚಿವ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಚುನಾವಣೆ ಫಲಿತಾಂಶ ದಿನದಂದೂ ಡಿ.ಕೆ. ಶಿವಕುಮಾರ್ ವಿದೇಶದಲ್ಲಿಯೇ ಉಳಿದುಕೊಳ್ಳಲಿದ್ದಾರೆ.

ಚುನಾವಣೆ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದು, ಆದರೆ ಈ ಸಂದರ್ಭದಲ್ಲಿ ರಾಜ್ಯದಲ್ಲಿರದೇ ಡಿಕೆಶಿ ವಿದೇಶದಲ್ಲಿರುವುದು ಶಾಸಕರನ್ನು ಉಳಿಸಿಕೊಳ್ಳುವ ಯತ್ನದಿಂದ ದೂರ ಉಳಿದರಾ ಎನ್ನುವ ಪ್ರಶ್ನೆ ಮೂಡಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಕುಟುಂಬಸ್ಥರೊಂದಿಗೆ ತೆರಳಿದ್ದು, ಇದರ ಹಿಂದಿನ ಉದ್ದೇಶವೇನು ಎನ್ನುವ ಪ್ರಶ್ನೆ ಉದ್ಭವವಾಗಿದೆ.ಇತ್ತ ಎಕ್ಸಿಟ್ ಪೋಲ್ ಬಳಿಕ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದು, ಡಿಕೆಶಿ ಸಂಪರ್ಕದಲ್ಲಿ ಇದ್ದ ನಾಗೇಂದ್ರ, ಕುಮಟಳ್ಳಿ ಅವರನ್ನ ಮತ್ತೆ ಸೆಳೆಯುವ ಪ್ರಯತ್ನ ಮಾಡುತ್ತಾರೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...