ರಾಜ್ಯದ ಮುಖ್ಯ ಮಂತ್ರಿ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಬಯಸುವುದಾಗಿ ಹಿಂದುಳಿದ ವರ್ಗಗಳ ಖಾತೆ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಪ್ರಸ್ತುತ ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾರೆ. ಅವರ ಸ್ಥಾನದಲ್ಲಿ ಸಿದ್ದರಾಮಯ್ಯ ಅವರನ್ನು ನೋಡುತ್ತೇನೆ ಎಂದು ಹೇಳಿದ್ದರು.
ಈ ಹಿಂದೆ ಕೂಡ ಸಿದ್ದರಾಮಯ್ಯನವರು ನಮ್ಮ ಮುಖ್ಯಮಂತ್ರಿ ಎಂದು ಹೇಳಿದ್ದು ಆ ಮಾತಿಗೆ ಈಗಲೂ ಬದ್ಧ ಎಂದರು. ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಹೊರಟ್ಟಿ ಹೇಳಿದಂತೆ ನಡೆಯುವುದಿಲ್ಲ. ಚುನಾವಣೆ ಎದುರಿಸಿದರೆ ಅದರ ಕಷ್ಟವೇನೆಂಬುದು ಗೊತ್ತಾಗುತ್ತಿತ್ತು ಎಂದು ಖಾರವಾಗಿ ಪ್ರತಿಕ್ರಿಯಿಸಿದರು
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಮೈತ್ರಿ ಸರ್ಕಾರದಲ್ಲಿ ನಡೆಯುತ್ತವೆಯೇ ಹೊರತು ಬೇರೆ ಯಾರ ಮಾತುಗಳೂ ನಡೆಯುವುದಿಲ್ಲ ಎಂದರು.