ಒಟ್ಟಿಗೇ ಥಿಯೇಟರ್​ಗಳಿಗೆ ಎಂಟ್ರಿ ಕೊಡಲಿದ್ದಾರೆ ಸುದೀಪ್-ದರ್ಶನ್..! ಈ ಹಿಂದೆಯೂ ಒಮ್ಮೆ ಇಬ್ಬರೂ ಒಟ್ಟಿಗೆ ಬಂದಿದ್ರು..!

Date:

ಅಭಿನಯ ಚಕ್ರವರ್ತಿ, ಕಿಚ್ಚ, ಬಾದ್ ಷಾ ಎಂದೆಲ್ಲಾ ಕರೆಸಿಕೊಳ್ಳುವ ನಟ ಸುದೀಪ್. ಚಾಲೆಂಜಿಂಗ್ ಸ್ಟಾರ್, ದಾಸ, ಚಕ್ರವರ್ತಿ, ಡಿ ಬಾಸ್ ಅಂತೆಲ್ಲಾ ಕರೆಸಿಕೊಳ್ಳುವ ದರ್ಶನ್. ಅವರಿಬ್ಬರು ಕನ್ನಡ ಚಿತ್ರರಂಗದ ಕಣ್ಮನಿಗಳು. ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಪಟ್ಟ ಅಲಂಕರಿಸಿರುವ ಮಹಾನ್ ನಟರು.
ಒಂದು ಕಾಲದ ದೋಸ್ತಿಗಳು. ಕಾರಣಾಂತರದಿಂದ ದೂರ ಆಗಿದ್ದಾರೆ. ಈಗ ಅವರಿಬ್ಬರು ಒಟ್ಟಿಗೇ ಥಿಯೇಟರ್​ಗಳಿಗೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ.
ದರ್ಶನ್ ಅಭಿನಯದ ಹಥ ಬಜೆಟ್ ಸಿನಿಮಾ ಕುರುಕ್ಷೇತ್ರ ಮತ್ತು ಸುದೀಪ್ ನಟನೆಯ ಪೈಲ್ವಾನ ಸಿನಿಮಾಗಳು ಒಂದೇ ದಿನ ರಿಲೀಸ್ ಆಗುವುದು ಖಚಿತ ಎಂದು ಹೇಳಲಾಗುತ್ತಿದೆ. ಇದೇ 2019ರ ಆಗಸ್ಟ್ 9ರಂದು ಕುರುಕ್ಷೇತ್ರ ರಿಲೀಸ್ ಆಗುವುದು ಪಕ್ಕಾ ಆಗಿದೆ. ಕುರುಕ್ಷೇತ್ರ ಟೀಮ್ ಡೇಟ್ ಫಿಕ್ಸ್ ಮಾಡಿ ಅನೌನ್ಸ್ ಕೂಡ ಮಾಡಿ ಬಿಟ್ಟಿದೆ. ಇದೇ ದಿನ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.
ದರ್ಶನ್ ಮತ್ತು ಸುದೀಪ್ ಅಭಿನಯದ ಸಿನಿಮಾಗಳು ಒಂದೇ ದಿನ ತೆರೆಗೆ ಅಪ್ಪಳಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಒಟ್ಟಿಗೆ ತೆರೆಕಂಡ ಉದಾಹರಣೆ ಇದೆ.

2006 ಫೆಬ್ರವರಿ 7ರಂದು ಸುದೀಪ್ ನಿರ್ದೇಶಿಸಿ ನಟಿಸಿದ್ದ ಮೈ ಆಟೋಗ್ರಾಫ್, ದರ್ಶನ್ ನಟನೆಯ ಸುಂಟರಗಾಳಿ ಸಿನಿಮಾ ಒಂದೇ ದಿನ ತೆರೆಕಂಡಿದ್ದವು.

ಅವರೆಡೂ ಸಿನಿಮಾಗಳು ಸೂಪರ್ ಹಿಟ್ ಆಗಿದ್ದು, ಯಶಸ್ವಿ ಪ್ರದರ್ಶನ ಕಂಡಿದ್ದವು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...