ಬಿಜೆಪಿಯವರು ಹಗಲುಗನಸು ಕಾಣಲಿ : ಎಚ್, ವಿಶ್ವನಾಥ್

Date:

ಲೋಕಸಭೆ ಮತದಾನೋತ್ತರ ಸಮೀಕ್ಷೆ ಹಿನ್ನೆಲೆಯಲ್ಲಿ ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ಬಿಜೆಪಿಯವರು ಎಲ್ಲಾ ರೀತಿಯ ಕನಸುಗಳನ್ನು ಕಾಣಬಹುದು.

ನಮ್ಮದೇನೂ ಅಭ್ಯಂತರವಿಲ್ಲ. ಇನ್ನು ಮೂರು ದಿನದಲ್ಲಿ ಮತದಾರರ ತೀರ್ಪು ಹೊರಬರಲಿದೆ. ಆಗ ಎಲ್ಲವೂ ಗೊತ್ತಾಗಲಿದೆ ಎಂದರು.

ಈ ಹಿಂದೆಯೂ ಸಮೀಕ್ಷೆಗಳು ನಡೆದಿದ್ದವು. ಆ ಸಮೀಕ್ಷೆಗಳ ವಾಸ್ತವಿಕತೆ ಏನಾಗಿತ್ತೆಂಬುದು ನಮ್ಮ ಮುಂದಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರು ಯಾರ ವಿರುದ್ಧ ಇದ್ದರು ಎಂಬುದನ್ನು ಹೇಳುವುದು ಕಷ್ಟ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿವೆ.ಮತದಾರರು ಈ ಎರಡೂ ಸರ್ಕಾರಗಳ ಆಡಳಿತವನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ ಎಂದರು.

ಮತದಾನದ ದಿನದಂದು ಮತದಾರರು ಗುಂಪುಗುಂಪಾಗಿ ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾವಣೆ ಮಾಡಿದ್ದಾರೆ. ಯಾರ ಪರವಾಗಿ, ಯಾರ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎಂಬುದು ನಿಗೂಢವಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯಲಿದೆ ಎಂಬುದನ್ನು ನಿರ್ದಿಷ್ಟವಾಗಿ ಹೇಳಲಾಗದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...

ಹಿಟ್ಟಿನ ಹುಳಿ ರುಚಿಯನ್ನು ಕಡಿಮೆ ಮಾಡಲು ಕೆಲವು ಪರಿಣಾಮಕಾರಿ ವಿಧಾನ

ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಹಾಗೂ ಫ್ರಿಜ್ ತಾಪಮಾನ ಅಸ್ಥಿರತೆಯಿಂದಾಗಿ ಇಡ್ಲಿ–ದೋಸೆ...