ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಲೋಕಸಭಾ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರೆದಿತ್ತು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಮೈತ್ರಿಗೆ ಸ್ಥಳೀಯ ಮಟ್ಟದಲ್ಲಿ ದೊಡ್ಡ ವಿರೋಧ ವ್ಯಕ್ತವಾಗಿದ್ದು, ಆರಂಭಿಕ ಹಂತದ ಮತ ಎಣಿಕೆ ನೋಡಿದರೆ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಲಿದೆಯಾ ಎಂಬ ಅನುಮಾನ ಕಾಡುತ್ತಿದೆ.
ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಆದರೆ ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಆರಂಭಿಕ ಹಂತದ ಮತ ಎಣಿಕೆಯಾಗಿದ್ದು, ಇದೇ ಅಂತಿಮವಲ್ಲ. ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬಿದ್ದ ಬಳಿಕವೇ ಈ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ.