ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಈ ಬಾರಿ ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಣಕ್ಕಿಳಿದಿದ್ದರು.
ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿರುವ ರಾಹುಲ್ ಗಾಂಧಿ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸೃತಿ ಇರಾನಿ ಪ್ರಬಲ ಸ್ಪರ್ಧೆಯೊಡ್ಡಬಹುದೆಂಬ ಕಾರಣಕ್ಕೆ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದರು. ಮೊದಲ ಹಂತದ ಮತಎಣಿಕೆಯಲ್ಲಿ ಅಮೇಥಿಯಲ್ಲಿ ಹಿನ್ನಡೆ ಅನುಭವಿಸಿರುವ ರಾಹುಲ್ ವಯನಾಡು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.