ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮತ್ತೆ ಶುರುವಾಗುತ್ತಿದೆ . ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ರಾಜ್ಯ ಮೈತ್ರಿ ಸರ್ಕಾರಾ ಕೊಚ್ಚಿ ಹೋಗುತ್ತಾ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ಶುರುವಾಗಿದೆ.
ಈ ದಿಢೀರ್ ಬೆಳವಣಿಗೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅವರು ಇಂದು ದೊಡ್ಡ ನಿರ್ಧಾರ ಕೈಗೊಳ್ಳುತ್ತಾರ ಎಂದು ಕಾದುನೊಡಬೇಕಿದೆ.
ಆಪರೇಷನ್ ಕಮಲ ತಪ್ಪಿಸಲು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುತ್ತಾರಾ ? ತುರ್ತು ಸಂಪುಟ ಸಭೆಯಲ್ಲಿ ಸಿಎಂ ಕೈಗೊಳ್ಳುವ ನಿರ್ಧಾರವಾದರೂ ಏನು ಎಂಬ ಪ್ರಶ್ನೆಗಳು ಭಾರೀ ಚರ್ಚೆ ಕಾರಣವಾಗಿವೆ.
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಬಳ್ಳಾರಿ ಶಾಸಕ ನಾಗೇಂದ್ರ ಬಿಜೆಪಿ ಸೇರುವ ಮೊದಲ ಪಟ್ಟಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಉಳಿದಂತೆ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಕಾಗವಾಡ ಶಾಸಕ ಶ್ರೀಮಂತಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಕಂಪ್ಲಿ ಶಾಸಕ ಗಣೇಶ್, ರಾಯಚೂರು ಗ್ರಾಮೀಣ ಬಸನಗೌಡ ದದ್ದಲ್ ಮತ್ತು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.