ಲೋಕಸಭೆ ಚುನಾವಣೆ ಶುರುವಾದಾಗಿನಿಂದಲೂ ಅಂತರ ಕಾಯ್ದುಕೊಂಡಿದ್ದ ಶಾಸಕ ಎಂ.ವೈ ಪಾಟೀಲ್ ಅವರು ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕ ಎಂ.ವೈ ಪಾಟೀಲ್ ಇದೀಗ ಮತ್ತೆ ಬಿಜೆಪಿಗೆ ಸೇರುವ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಲಬುರ್ಗಿಯಲ್ಲಿ ಈಗಾಗಲೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಕಲಬುರ್ಗಿ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದಾರೆ.ಈ ಬೆನ್ನಲ್ಲೇ ಎಂ.ವೈ.ಪಾಟೀಲ್ ಅವರೂ ಕಾಂಗ್ರೆಸ್ ಕೈ ಕೊಟ್ಟು ಬಿಜೆಪಿ ಸೇರುತ್ತಾರೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಂ.ವೈ.ಪಾಟೀಲ್ ಅವರು ಕಾಂಗ್ರೆಸ್ ನಿಂದ ಯಾವುದೇ ಅಂತರ ಕಾಯ್ದುಕೊಂಡಿಲ್ಲ. ಅವರು ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದಾರೆ.