ಇಂದು ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು ಎಎನ್‌ಐ ವರದಿ ಪ್ರಕಟಿಸಿದೆ.
ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ದೆಹಲಿ ಮಾಜಿ ಸಿಎಂ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್, ಗುಲಾಮ್ ನಬಿ ಆಜಾದ್ ಮುಂತಾದ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಸಿಡಬ್ಲ್ಯೂಸಿ ಸಭೆಗೆ ಗೈರಾಗಿದ್ದದ್ದು ಅಚ್ಚರಿ ಮೂಡುವಂತೆ ಮಾಡಿದೆ .