ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ತೀವ್ರ ಬೇಸರದಲ್ಲಿದ್ದ ದೋಸ್ತಿ ಸರ್ಕಾರ ಇದೀಗ ಕುಮಾರಸ್ವಾಮಿಯವರು ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹೊಸ ಪ್ಲಾನ್ ಮಾಡುತ್ತಿದ್ದಾರೆ .
ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುತ್ತಿಲ್ಲ. ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳ ಅಭಿವೃದ್ಧಿಯತ್ತ ಗಮನ ನೀಡುತ್ತಿಲ್ಲ ಎಂದು ಅತೃಪ್ತರ ಬಣ ಆರೋಪಿಸುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಸಿಎಂ ಕೈ ಶಾಸಕರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಶಾಸಕರ ವಿಶ್ವಾಸ ಗಳಿಸಲು ಸಿಎಂ ಕುಮಾರಸ್ವಾಮಿ ಮುಂದಾಗುವ ಸಾಧ್ಯತೆ ಇದೆ ಎನ್ನಲಾಗಿದೆ.