ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲುಂಟಾಗಿದ್ದರಿಂದ ಹಾಗೂ ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ ಇದೇ ಕಾರಣಕ್ಕಾಗಿ ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಬದಲಾವಣೆ ಆಗುವ ನಿರೀಕ್ಷೆಗಳು ಇದೀಗ ಹುಟ್ಟಿಕೊಂಡಿವೆ.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸೋತ ಪರಿಣಾಮ ಮಂಡ್ಯ ಲೋಕಸಭಾ ವ್ಯಾಪ್ತಿಯ ಮೂರು ಜನ ಮಂತ್ರಿಗಳ ತಲೆದಂಡ ಮಾಡಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮೇಲುಕೋಟೆ ಶಾಸಕ ಪುಟ್ಟರಾಜು, ಮದ್ದೂರು ಶಾಸಕ ಡಿ ಸಿ ತಮ್ಮಣ್ಣ ಹಾಗೂ ಕೆಆರ್ ನಗರ ಶಾಸಕ ಸಾ ರಾ ಮಹೇಶ್ರನ್ನು ಸಂಪುಟದಿಂದ ಹೊರಹಾಕುವ ಸುದ್ದಿ ಸಿಕ್ಕಿದೆ ಆದರೆ, ಸಚಿವ ಸಂಪುಟದಿಂದ ಯಾರನ್ನು ಕೂಡಾ ಕೈಬಿಡಲಾಗುವುದಿಲ್ಲ, ಸಂಪುಟ ಪುನರ್ ರಚನೆ ಸದ್ಯಕ್ಕಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಆದರೂ ಮುಖ್ಯಮಂತ್ರಿಗಳ ನಡೆ ಏನೆಂಬುದು ಎಲ್ಲರಲ್ಲು ಕುತೂಹಲ ಮೂಡಿಸಿದೆ.