ಶಿರಾ ಶಾಸಕ ಕೆಎಸ್‌ಆರ್ ಟಿಸಿ ಅಧ್ಯಕ್ಷ ಬಿ. ಸತ್ಯನಾರಾಯಣ್ ಗೆ ಬಿಜೆಪಿ ನಾಯಕರು ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಡಿ.ವಿ. ಸದಾನಂದಗೌಡ ಹಾಗೂ ಸಿ.ಪಿ. ಯೋಗೇಶ್ವರ್ ಮೂಲಕ ಬಿ. ಸತ್ಯನಾರಾಯಣ್ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ಸತ್ಯನಾರಾಯಣ್ ಅವರು ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಜೆಡಿಎಸ್ ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನ ನೀಡಿದ್ದರು. ಆದರೆ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಪ್ರತಿ ವಿಚಾರಕ್ಕೂ ಹಸ್ತಕ್ಷೇಪ ವಹಿಸುತ್ತಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಸತ್ಯನಾರಾಯಣ್ ಅವರು ಬಿಜೆಪಿ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.