ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ದೋಸ್ತಿ ಸರ್ಕಾರದ ಬುಡ ಅಲ್ಲಾಡತೊಡಗಿದ್ದು, ಸಮಿಶ್ರ ಸರ್ಕಾರ ಉಳಿಸಿಕೊಳ್ಳಲು ಉಭಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸತೊಡಗಿದ್ದಾರೆ.
ಬಿಜೆಪಿ ಸರ್ಕಾರ ರಚನೆ ಪ್ರಯತ್ನಕ್ಕೆ ಬ್ರೇಕ್ ಹಾಕಿ ಸರ್ಕಾರ ಸುಭದ್ರವಾಗಿಸಿಕೊಳ್ಳುವ ನಿಟ್ಟಿನಲ್ಲಿ ದೋಸ್ತಿ ನಾಯಕರು ಕಾರ್ಯತಂತ್ರ ರೂಪಿಸಿದ್ದು, ಸಂಪುಟ ಪುನರ್ ರಚನೆಗೆ ಮುಂದಾಗಿದ್ದಾರೆ. ಕೆಲವು ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದ್ದು, ಅತೃಪ್ತ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ.
ಇದೇ ವೇಳೆ ವಾರದಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕೀಯ ಚಟುವಟಿಕೆಗಳು ದೆಹಲಿಗೆ ಶಿಫ್ಟ್ ಆಗಲಿವೆ. ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ಮುಂದುವರಿಸಿಕೊಂಡು ಹೋಗುವ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.