ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಸಚಿವರಾಗುತ್ತಾರೆ ಎಂಬ ಕುತೂಹಲ ಮೂಡಿದ್ದು, ಜೊತೆಗೆ ಪಕ್ಷೇತರ ಸಂಸದೆ ಸುಮಲತಾ ಅವರಿಂದ ಮೋದಿ ಅವರು ಬಾಹ್ಯ ಬೆಂಬಲ ಪಡೆಯುತ್ತಾರೆ ಎನ್ನಲಾಗಿದ್ದು, ಸುಮಲತಾ ಅವರನ್ನು ಮಂತ್ರಿ ಮಾಡುವುದರ ಮೂಲಕ ದೇವೇಗೌಡರಿಗೆ ಟಾಂಗ್ ಕೊಡುವ ಲೆಕ್ಕಚಾರವನ್ನುಮೋದಿ ಮಾಡಿದ್ದಾರೆ ಎನ್ನಲಾಗಿದೆ.
ಮಂಡ್ಯ, ಮೈಸೂರು ಭಾಗದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಭಾವ ಅಧಿಕವಾಗಿದೆ. ಹೀಗಾಗಿ ಜೆಡಿಎಸ್ ನ ಪ್ರಭಾವವನ್ನು ಕುಗ್ಗಿಸಲು ಮತ್ತು ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಮೋದಿ ಬಿಗ್ ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಇನ್ನು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ಸೂಚಿಸಿದ್ದರು. ಹೀಗಾಗಿ ಸುಮಲತಾ ಅವರಿಗೆ ಮೋದಿ ಸಚಿವ ಸ್ಥಾನ ಕೊಡುತ್ತಾರೆ ಎಂದು ಹೇಳಲಾಗುತ್ತಿದೆ.