ಸದಾಶಿವ ನಗರದಲ್ಲಿರುವ ಪರಮೇಶ್ವರ್ ಮನೆಯಲ್ಲಿ ಈಗಾಗಲೇ ಸಭೆ ಆರಂಭವಾಗಿದ್ದು, ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಸಚಿವೆ ಜಯಮಾಲಾ, ಎಂಟಿಬಿ ನಾಗರಾಜ್, ವೆಂಕಟರಮಣಪ್ಪ, ದಿನೇಶ್ ಗುಂಡೂರಾವ್ ಸೇರಿದಂತೆ ಬಹುತೇಕ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ಪಾಲ್ಗೊಂಡಿದ್ದಾರೆ.
ಇಂದಿನ ಸಚಿವರ ಸಭೆಯಲ್ಲಿ ಖುದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಪಕ್ಷ ಮತ್ತು ಮೈತ್ರಿ ಸರ್ಕಾರ ಸಂದಿಗ್ದ ಪರಿಸ್ಥಿತಿಯಲ್ಲಿದ್ದು, ಅನಿವಾರ್ಯವಾಗಿ ಕೆಲವರು ತಮ್ಮ ಮಂತ್ರಿ ಸ್ಥಾನವನ್ನು ತ್ಯಾಗ ಮಾಡಬೇಕು ಎನ್ನುವ ಮಾತನ್ನು ಸಚಿವರ ಮುಂದಿಟ್ಟಿದ್ದಾರೆ ಎನ್ನಲಾಗಿದೆ.