ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಲೋಕಸಭೆ ಚುನಾವಣೆಯ ಫಲಿತಾಂಶದ ತನಿಖೆಯಾಗಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ, ಕರ್ನಾಟಕದ ಜನತೆ ಕಾಂಗ್ರೆಸ್ ಪರವಿರುವುದನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಿಜೆಪಿ ಹೇಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದೆ ಬಿದ್ದಿದೆ ಎಂದು ಅಚ್ಚರಿ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಕಾಂಗ್ರೆಸ್ 1221 ಸ್ಥಾನಗಳಲ್ಲಿ 509 ರಲ್ಲಿ ಜಯಭೇರಿ ಬಾರಿಸಿದೆ. ಅಲ್ಲದೆ 42 ಪ್ರತಿಶತ ಸೀಟುಗಳನ್ನು ಗೆದ್ದಿದೆ ಎಂದಿದ್ದಾರೆ.
ಈ ಫಲಿತಾಂಶದಿಂದಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಜೊತೆಗಿರುವುದು ಕಂಡು ಬರುತ್ತದೆ. ಹೀಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ತನಿಖೆ ನಡೆಸುವುದು ಸೂಕ್ತ ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.