ಹಾಸನ ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲು ವರಿಷ್ಠರು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷ ಸಂಘಟನೆಗೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಕಾರ್ಯತಂತ್ರ ರೂಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ಮಧುಬಂಗಾರಪ್ಪ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ದೇವೇಗೌಡರಿಗೆ ಮನವಿ ಮಾಡಿದ್ದು, ಇದಕ್ಕೆ ಒಪ್ಪಿದ ದೇವೇಗೌಡರು ಪ್ರಜ್ವಲ್ ಗೆ ಅಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.