ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್‍ಗೆ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆ ಚುನಾವಣೆ ಬಳಿಕ ಬಿಜೆಪಿಯವರು, ಇವಿಎಂ ಮ್ಯಾನಿಪ್ಲೇಟ್ ಮಾಡ್ತಾರೆ ಅನ್ನೋ ಅನುಮಾನ ಹೆಚ್ಚಾಗಿದೆ ಅಂತಾ ಹೇಳಿದ್ದಾರೆ.
ಲೋಕಸಭಾ ಚುನಾವಣೆ ವೇಳೆ ಬಿಜೆಪಿ 28 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಗೆದ್ದಿದೆ. ಆದ್ರೆ ಅಧಿಕ ಅಂತರದಲ್ಲಿ ಬಿಜೆಪಿ ಎಲ್ಲೆಲ್ಲಿ ಗೆಲುವು ಸಾಧಿಸಿತ್ತೋ ಅಲ್ಲಿನ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ ಎಂದಿದ್ದಾರೆ.
ಇದೇ ವೇಳೆ ಜನರು ಸ್ಥಳೀಯ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದಾರೆ. ಪ್ರತಿ ಚುನಾವಣೆಗಳಲ್ಲೂ ಕೂಡಾ ಫಲಿತಾಂಶ ವ್ಯತ್ಯಾಸವಿರುತ್ತದೆ ಅಂತಾ ಸಿದ್ದರಾಮಯ್ಯ ತಿಳಿಸಿದ್ದಾರೆ.