ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಳೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್ ಶಾಸಕರ ಸಭೆ ಕರೆದಿದ್ದಾರೆ.ಸಂಜೆ 4-40 ಕ್ಕೆ ಈ ಸಭೆ ನಡೆಯಲಿದ್ದು, ಜೆಡಿಎಸ್ ನ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಸೋಲಿನ ಕುರಿತೂ ಈ ಸಭೆಯಲ್ಲಿ ಪರಾಮರ್ಶೆ ನಡೆಯಲಿದೆ ಎಂದು ಹೇಳಲಾಗಿದೆ.