ಲೋಕಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಎಸ್.ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಅದರ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದರು.
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಮರುದಿನವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದೆ. ಆ ಸಂದರ್ಭದಲ್ಲಿ ದೇವೇಗೌಡರು ಸ್ವಲ್ಪ ದಿನ ಕಾಯುವಂತೆ ಸಲಹೆ ಮಾಡಿದ್ದರು. ಹೀಗಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.