ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ ಬಳಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ.
Traffic update :-
Due to a fire incident near Jagannath Ghat, Strand Bank Road is closed to traffic. Necessary diversion on.— DCP Traffic Kolkata (@KPTrafficDept) June 8, 2019
ಸ್ಥಳಕ್ಕೆ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾದ ಕಾರಣ ವಾಹನಗಳ ಮಾರ್ಗ ಬದಲಾಯಿಸಲಾಗಿದೆ. ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.






