ಭಾರತೀಯರ ಆಟಕ್ಕೆ ತಲೆಬಾಗಿದ ಆಸಿಸ್..! ವಿಶ್ವಕಪ್ ನಲ್ಲಿ ಸತತ 2ನೇ ಗೆಲುವು.

Date:

ಇಂಗ್ಲೆಂಡಿನ ಓವಲ್ ಮೈದಾನದಲ್ಲಿ ನಡೆದ ICC ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿದೆ, ಟಾಸ್ ಗೆದ್ದು ಬ್ಯಾಟ್ ಆಯ್ದುಕೊಂಡ ಭಾರತ ತಂಡಕ್ಕೆ ಆರಂಭಿಕರಾಗಿ ಬಂದ ರೋಹಿತ್ ಶರ್ಮಾ (57) ಮತ್ತು ಶಿಖರ್ ಧವನ್ (117) 127 ರನ್ ಗಳ ಉತ್ತಮ ಆರಂಭವನ್ನು ಒದಗಿಸಿಕೊಟ್ಟರು.
ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ನಂತರ ವಿರಾಟ್ ಕೊಹ್ಲಿ 82, ಹಾರ್ದಿಕ್ ಪಾಂಡ್ಯ 48, m s ಧೋನಿ 27, K L ರಾಹುಲ್ 11 ರನ್ ಗಳಿಸುವುದರ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 50 ಓವರ್ ಗಳಲ್ಲಿ 353 ರನ್ ಗಳ ಬೃಹತ್ ಟಾರ್ಗೆಟ್ಟನ್ನು ಭಾರತ ತಂಡ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ಆಸಿಸ್ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದರೂ ಸಹ ಭಾರತದ ಬೌಲರ್ ಗಳ ಕರಾರುವಕ್ಕಾದ ಪ್ರದರ್ಶನದಿಂದ ಗುರಿಯನ್ನು ತಲುಪುವಲ್ಲಿ ವಿಫಲವಾಯ್ತು, ಆಂತಿಮವಾಗಿ ಆಸ್ಟ್ರೇಲಿಯಾ 50 ಓವರ್ ಗೆ 316 ರನ್ ಗಳಿಸಿ ಆಲ್ ಔಟ್ ಆಗುವ ಮೂಲಕ ಭಾರತಕ್ಕೆ ಶರಣಾಯ್ತು ಇದರೊಂದಿಗೆ ಭಾರತ ತಂಡ ವಿಶ್ವಕಪ್ ಸಮರದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಆಡಿದ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...