ಜಿಂದಾಲ್‌ಗೆ ಜಮೀನು ನೀಡಲು ಅವಕಾಶ ನೀಡುವುದಿಲ್ಲ ಎಂದ ಯಡಿಯೂರಪ್ಪ

Date:

ಯಾವುದೇ ಕಾರಣಕ್ಕೂ ಬಳ್ಳಾರಿಯ ಜಿಂದಾಲ್ ಅದಿರು ಮತ್ತು ಉಕ್ಕಿನ ಕಾರ್ಖಾನೆಗೆ ಬೆಲೆಬಾಳುವ ಜಮೀನು ನೀಡಲು ಅವಕಾಶ ನೀಡುವುದಿಲ್ಲ. ಇದಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಕೆಲ ಸಚಿವರು ಜಿಂದಾಲ್ ಕಂಪನಿಯಿಂದ ಕಿಕ್‍ಬ್ಯಾಕ್ ಪಡೆದುಕೊಂಡು ಜಮೀನು ನೀಡಲು ಹೊರಟಿದ್ದಾರೆ ಎಂದು ದೂರಿದರು.

ಯಾವುದೇ ಕಾರಣಕ್ಕೂ ಬೆಲೆ ಬಾಳುವ ಜಮೀನನ್ನು ಜಿಂದಾಲ್‍ಗೆ ಕೊಡಲು ಬಿಡುವುದಿಲ್ಲ. ಇದೇ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವು.

ಗಿರೀಶ್ ಕಾರ್ನಾಡ್‍ರವರ ನಿಧನದ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ತಿಳಿಸಿದರು.

ಜೂ.14 ರಿಂದ 16ರವರೆಗೆ ಮೂರು ದಿನಗಳ ಕಾಲ ಅಹೋರಾತ್ರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ. ಇದರಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಂತಾಪ: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಗಿರೀಶ್ ಕಾರ್ನಾಡ್ ನಿಧನಕ್ಕೆ ಯಡಿಯೂರಪ್ಪ ಇದೇವೇಳೆ ಸಂತಾಪ ವ್ಯಕ್ತಪಡಿಸಿದರು. ನಟರಾಗಿ, ಸಾಹಿತಿಗಳಾಗಿ ತಮ್ಮದೇ ಪ್ರತಿಭೆ ಮೂಲಕ ನಾಡು ಮತ್ತು ರಾಷ್ಟ್ರಕ್ಕೆ ಕೊಡುಗೆ ನೀಡಿದ್ದಾರೆ. ಅವರ ನಿಧನ ತುಂಬಲಾರದ ನಷ್ಟ ಎಂದು ವಿಷಾದಿಸಿದರು.

Share post:

Subscribe

spot_imgspot_img

Popular

More like this
Related

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...