ಸಿಎಂ ಮೊದಲ ಗ್ರಾಮ ವಾಸ್ತವ್ಯಕ್ಕೆ ಗುರುಮಿಟ್ಕಲ್ ತಾಲೂಕಿನ ಚಂಡರಕಿ ಗ್ರಾಮ ಫಿಕ್ಸ್ ಆಗಿದ್ದು, ಚಂಡರಕಿ ಶಾಲೆಯಲ್ಲಿ ಸಿಎಂ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜೂನ್ 20 ರಂದು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರಿನಿಂದ ಯಾದಗಿರಿವರೆಗೆ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.
ಸಿಎಂ ಕುಮಾರಸ್ವಾಮಿ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಿಂದ ಗ್ರಾಮ ವಾಸ್ತವ್ಯ ಕೈಗೊಂಡಿದ್ದು, ಚಂಡರಕಿ ಗ್ರಾಮದಲ್ಲಿ ಮೊದಲ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.ಇನ್ನೂ ಸಿಎಂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕೆ ರೈಲಿನಲ್ಲೇ ಪ್ರಯಾಣಿಸುತ್ತಿರುವುದು ವಿಶೇಷವಾಗಿದೆ.