ನಿಮ್ಮನ್ನು ನೀವೇ ಪ್ರಧಾನಿ ಎಂದು ಭಾವಿಸಿ ಎಂದು ಕಾರ್ಯದರ್ಶಿಗಳಿಗೆ ಸಲಹೆ ನೀಡಿದ ಮೋದಿ!? ಯಾಕೆ ಗೊತ್ತಾ?

Date:

ಸರ್ಕಾರದ ಅಜೆಂಡಾಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಿರುವ ಮಹತ್ವದ ನಿರ್ಧಾರಗಳನ್ನು ನೀವೇ ತೆಗೆದುಕೊಳ್ಳಿ. ಈ ನಿರ್ಧಾರ ತೆಗೆದುಕೊಳ್ಳುವಾಗ ನಿಮ್ಮನ್ನು ನೀವೇ ಪ್ರಧಾನಿ ಎಂದು ಭಾವಿಸಿ. ಇಂತಹ ಸಂದರ್ಭಗಳಲ್ಲಿ ಯಾವುದಾದರೂ ಪ್ರಾಮಾಣಿಕ ತಪ್ಪುಗಳಾದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ನಾವು ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ.’ ಇದು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಕೊಟ್ಟ ಸಲಹೆ.

ಮುಂದಿನ ಐದು ವರ್ಷಗಳಲ್ಲಿ ಪರಿಣಾಮಕಾರಿ ನಿರ್ಣಯಗಳ ವಿಚಾರವಾಗಿ ಸರ್ಕಾರ 100 ದಿನಗಳ ಒಳಗಾಗಿ ಕೈಗೊಳ್ಳಬಹುದಾದ ನಿರ್ಧಾರಗಳ ಬಗ್ಗೆ ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳ ಜತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಈ ರೀತಿ ಪ್ರೋತ್ಸಾಹ ನೀಡಿದ್ದಾರೆ.

ಸುದೀರ್ಘ 150 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಮೋದಿ ಹೇಳಿದ್ದಿಷ್ಟು.

‘ಜನಸಾಮಾನ್ಯರ ಬದುಕನ್ನು ಮತ್ತಷ್ಟು ಸರಳವಾಗಿ ಮಾಡಲು ಆಡಳಿತ ಯಂತ್ರ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಆಡಳಿತ ವರ್ಗದ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಹೀಗಾಗಿ ಅಧಿಕಾರಿಗಳು ಈ ಗುರಿ ಸಾಧನೆ ಮಾಡುವಾಗ ತಾವೇ ಮುಂದೆ ನಿಂತು ವ್ಯವಸ್ಥೆಯನ್ನು ಮುನ್ನಡೆಸಬೇಕು. ಇಂತಹ ಸಂದರ್ಭಗಳಲ್ಲಿ ನಿಮ್ಮನ್ನು ನೀವು ಪ್ರಧಾನಿ ಎಂದು ಭಾವಿಸಿ ಜವಾಬ್ದಾರಿಯುತ ನಿರ್ಧಾರಗಳನ್ನು ಕೈಗೊಳ್ಳಿ. ಪ್ರಾಮಾಣಿಕವಾಗಿ ಕೆಲಸ ಮಾಡುವಾಗ ಕೆಲವು ಸಣ್ಣ ಪುಟ್ಟ ತಪ್ಪುಗಳು ಆಗುತ್ತವೆ. ಅದು ಸಹಜ. ಇಂತಹ ಪರಿಸ್ಥಿತಿಯಲ್ಲಿ ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.’

ಈ ಮಧ್ಯೆ ತೆರಿಗೆ ಇಲಾಖೆಯಲ್ಲಿನ 12 ಹಿರಿಯ ಅದಿಕಾರಿಗಳಿಗೆ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳಲು ಸೂಚನೆ ನೀಡುವ ಮೂಲಕ ಕೆಲಸ ಮಾಡದವರನ್ನು ಮನೆಗೆ ಕಳುಹಿಸುವ ಸಂದೇಶವನ್ನು ಮೋದಿ ರವಾನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...