ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾ ಕರಂದ್ಲಾಜೆಯಂತಹ ಹೆಣ್ಣು ಮಕ್ಕಳ ಬಾಯಲ್ಲಿ ಅಂತ ಪದ ಬಾರದು. ಅವರ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿ ಜನರಿಗೆ ಗೊತ್ತಿದೆ. ಅದೆ ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯು ಜನರಿಗೆ ಗೊತ್ತಿದೆ. ಜಿಂದಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ಸಮಿತಿಯನ್ನು ರಚನೆ ಮಾಡಲಾಗಿದೆ. ತಕರಾರಿದ್ದರೆ ಕಮಿಟಿ ಮುಂದೆ ಹೋಗಲಿ.ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡೋದು ಸರಿಯಲ್ಲ ಎಂದು ಕಿಡಿಕಾರಿದರು.

ಐಎಂಎ ವಂಚನೆ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರು ಸಚಿವರಾಗಿದ್ದರು ಸರಿ, ಶಾಸಕರಾಗಿದ್ದರೂ ಸರಿ. ನಮ್ಮ ಇಲಾಖೆ ಪೊಲೀಸರ ಮೇಲೆ ನನಗೆ ನಂಬಿಕೆ ಇದೆ ಎಂದರು.






