ಪಾಕಿಸ್ತಾನದ ವಿರುದ್ಧ ಮತ್ತೊಂದು ದಾಳಿಯಲ್ಲಿ ಭಾರತ ಯಶಸ್ವಿಯಾಗಿದೆ..! ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವಕಪ್ ಕ್ರಿಕೆಟ್‍ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ದಾಖಲಿಸಿರುವ ಪ್ರಚಂಡ ಗೆಲುವನ್ನು ವಿಶ್ಲೇಷಿಸಿದ ಬಗೆ ಇದು.
ಇಂಗ್ಲೆಂಡ್‍ನ ಮ್ಯಾಂಚೆಸ್ಟರ್‍ನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಪಾಕಿಸ್ತಾನ ವಿರುದ್ಧ 89 ರನ್‍ಗಳ ರೋಚಕ ಗೆಲುವು ದಾಖಲಿಸಿರುವುದಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಕ್ರಿಕೆಟ್ ತಂಡವನ್ನು ಶಾ ಅಭಿನಂದಿಸಿದ್ದಾರೆ.
ನಾವು ಈಗಾಗಲೇ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮತ್ತು ಬಾಲಾಕೋಟ್ ವಾಯು ದಾಳಿ ನಡೆಸಿ ಯಶಸ್ವಿಯಾಗಿದ್ದೇವೆ. ಈಗ ನಮ್ಮ ಕ್ರಿಕೆಟ್ ತಂಡ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಜಯ ಸಾಧಿಸಿದೆ ಎಂದು ಗೃಹ ಸಚಿವರು ಬಣ್ಣಿಸಿದ್ದಾರೆ.