No menu items!
3.4 C
Munich
Thursday, April 23, 2026

ಸಂಸದರಿಗೆ ಬೆಂಗಳೂರಿನಲ್ಲಿ ಡಿಕೆಶಿ ಡಿನ್ನರ್ !?

Must read

ಡಿ.ಕೆ.ಶಿವಕುಮಾರ್..ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂದೇ ಪ್ರಖ್ಯಾತಿ ಪಡೆದಿರುವ ಸಚಿವರು. ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಇವರಿಗೆ ಒಳ್ಳೆ ನಂಟಿದೆ. ಇದನ್ನು ಉಪಯೋಗಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಲು ಡಿಕೆಶಿ ಪ್ಲಾನ್ ಮಾಡಿದ್ದಾರಂತೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಘಟಾನುಘಟಿ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಕೆ.ಎಚ್‍.ಮುನಿಯಪ್ಪ, ವೀರಪ್ಪ ಮೊಯ್ಲಿ ಸೋಲುಂಡಿದ್ದಾರೆ. ಇದನ್ನೇ ದಾಳವಾಗಿಸಿಕೊಂಡು ಡಿಕೆಶಿ ರಾಷ್ಟ್ರಮಟ್ಟದಲ್ಲಿ ಮುನ್ನೆಲೆಗೆ ಬರಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಂಸದರಿಗೆ ಡಿಕೆಶಿ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರಂತೆ.

ರಾಜ್ಯದ ಅಭಿವೃದ್ಧಿ ಯೋಜನೆಗಳ ಚರ್ಚೆ ನೆಪದಲ್ಲಿ, ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಈ ಸಂಬಂಧ ರಾಜ್ಯ ಕಾಂಗ್ರೆಸ್‍ ರಾಜ್ಯಸಭಾ ಸದಸ್ಯರಿಗೆ ಡಿಕೆಶಿ ಈಗಾಗಲೇ ಅಹ್ವಾನ ನೀಡಿದ್ದಾರಂತೆ.ಇನ್ನು ಬಿಜೆಪಿ ಸಂಸದರಿಗೂ ಇಂದು ಆಹ್ವಾನ ನೀಡಲಿದ್ದಾರೆ ಎನ್ನಲಾಗ್ತಿದೆ. ವಿಶೇಷ ಅಂದ್ರೆ ಮಂಡ್ಯದ ಸಂಸದೆ ಸುಮಲತಾ ಅವರಿಗೂ ಡಿಕೆಶಿ ಔತಣ ಕೂಟಕ್ಕೆ ಕರೆಯಲಿದ್ದಾರೆ ಅಂತಾ ಹೇಳಲಾಗ್ತಿದೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article