ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಿಂದ ಶಿಖರ್ ಧವನ್ ಔಟ್ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೆರಳಿಗೆ ಗಾಯ ಮಾಡಿಕೊಂಡಿದ್ದ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ.
ಶಿಖರ್ ಧವನ್ ಬದಲಿಗೆ ರಿಷಬ್ ಪಂತ್ ಅವರಿಗೆ ಅವಕಾಶ ನೀಡಲಾಗಿದೆ. ಬೆರಳಿನ ಗಾಯದಿಂದ ಶಿಖರ್ ಧವನ್ ಚೇತರಿಸಿಕೊಳ್ಳಲು ಇನ್ನು ಹೆಚ್ಚಿನ ಸಮಯ ಅಗತ್ಯವಿರುವ ಹಿನ್ನೆಲೆಯಲ್ಲಿ ಅವರು ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡ ಬಳಿಕ ಒಂದು ವಾರದ ನಂತರ ತಂಡಕ್ಕೆ ಸೇರಿಸಿಕೊಳ್ಳುವ ಬಗ್ಗೆ ವೈದ್ಯಕೀಯ ತಂಡ ನಿಗಾ ವಹಿಸಿದ್ದು, ಚೇತರಿಕೆಗೆ ಹೆಚ್ಚಿನ ಸಮಯ ಬೇಕಾಗುವುದರಿಂದ ವಿಶ್ವಕಪ್ ಟೂರ್ನಿಯಿಂದ ಅವರು ನಿರ್ಗಮಿಸಿದ್ದಾರೆ ಎಂದು ಹೇಳಲಾಗಿದೆ.