ಮಾಜಿ ಸಂಸದೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೋಕಸಭಾ ಚುನಾವಣೆಯ ಬಳಿಕ ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಅಲ್ಲದೆ ಅವರ ಟ್ವಿಟ್ಟರ್ ಖಾತೆಯೂ ನಿಷ್ಕ್ರಿಯವಾಗಿದೆ.
ಇದರ ಮಧ್ಯೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಫಲಿತಾಂಶದ ಕುರಿತಂತೆ ರಮ್ಯಾ ದಿಕ್ಕು ತಪ್ಪಿಸಿದ್ದರೆಂಬ ವದಂತಿಗಳು ಹರಿದಾಡುತ್ತಿವೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿರುವ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ರಮ್ಯಾ ವಿರುದ್ಧ ಮಾಡಲಾಗುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಮತ್ತವರ ತಂಡ ಬಿಡುವಿಲ್ಲದಂತೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಕಾರಣ ಈಗ ವಿಶ್ರಾಂತಿಯಲ್ಲಿದ್ದಾರೆ. ಶೀಘ್ರದಲ್ಲೇ ಮತ್ತೆ ಸಕ್ರಿಯರಾಗಲಿದ್ದಾರೆ ಎಂದು ತಿಳಿಸಿದ್ದಾರೆ.