ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಮುಖಂಡ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ,
ಡಿ.ಕೆ.ಶಿವಕುಮಾರ್ ಅವರ ತಾಯಿಗೆ ಗೌರಮ್ಮ ಅವರಿಗೆ ಸಂಬಂಧಿಸಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದಾಯ ತೆರಿಗೆ ಇಲಾಖೆಯ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು ಇದರ ಸಲುವಾಗಿ ಮೂರು ತಿಂಗಳ ಓಳಗಾಗಿ ವಿವರಣೆ ನೀಡುವಂತೆ ಸೂಚಿಸಲಾಗಿತ್ತು.
ಈ ಶೋಕಾಸ್ ನೋಟಿಸ್ ರದ್ದು ಮಾಡುವಂತೆ ಗೌರಮ್ಮ ಅವರ ಪರ ವಕೀಲರು ಹೈಕೋರ್ಟ್‌ಗೆ ಮನವಿ ಅರ್ಜಿಯನ್ನು ಸಲ್ಲಿಸಿದ್ದರು ಇದರ ಸಲುವಾಗಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಾಲಯ ಐಟಿ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ ಇದರಿಂದ ಡಿಕೆಶಿಗೆ ಇದ್ದ ದೊಡ್ಡ ತಲೆನೋವೊಂದು ತಪ್ಪಿದಂತಾಗಿದೆ.