ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲ್ಲೂಕಿನ ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಇಂದು ಗ್ರಾಮವಾಸ್ತವ್ಯ ಮಾಡಲಿದ್ದಾರೆ.
ಬೆಂಗಳೂರಿನಿಂದ ರೈಲಿನಲ್ಲಿ ಯಾದಗಿರಿಗೆ ಆಗಮಿಸಿದ್ದ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಬೆಂಗಳೂರು – ದೆಹಲಿ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಸಿಎಂ ಯಾದಗಿರಿಗೆ ಆಗಮಿಸಿದ್ದು, ಯಾದಗಿರಿಯ ಪ್ರವಾಸಿ ಮಂದಿರಕ್ಕೆ ತೆರಳಿದ್ದಾರೆ. ಕೆಲ ಸಮಯ ವಿಶ್ರಾಂತಿ ಬಳಿಕ ಅವರು ಚಂಡರಕಿ ಗ್ರಾಮಕ್ಕೆ ತೆರಳಲಿದ್ದಾರೆ. ಸಂಜೆಯವರೆಗೂ ಜನತಾದರ್ಶನ ನಡೆಸಲಿದ್ದಾರೆ.
ಯಾದಗಿರಿ ರೈಲು ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಇನ್ನು ಮುಂದೆ ವಾರದಲ್ಲಿ ಒಂದು ದಿನ ಗ್ರಾಮವಾಸ್ತವ್ಯ ಮಾಡುತ್ತೇನೆ. ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮವಾಸ್ತವ್ಯ ಸಹಕಾರಿಯಾಗಲಿದೆ. ಅಂದಿನ ಗ್ರಾಮ ವಾಸ್ತವ್ಯಕ್ಕೂ ಇಂದಿನ ಗ್ರಾಮ ವಾಸ್ತವ್ಯಕ್ಕೆ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ ಗ್ರಾಮವಾಸ್ತವ್ಯದಿಂದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಬಹುದು. ಸ್ಥಳದಲ್ಲೇ ತೀರ್ಮಾನ ಕೈಗೊಳ್ಳಲು ಅವಕಾಶವಿದೆ ಎಂದು ಹೇಳಿದ್ದಾರೆ.