ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀ ಇಂಡಿಯಾ 8 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು.ಆರಂಭಿಕ ಆಟಗಾರ ಕೆ ಎಲ್ ರಾಹುಲ್ 30 ರನ್ ಗಳಿಸಿ ಮೊಹಮ್ಮದ್ ನಬಿ ಬೌಲಿಂಗ್ ನಲ್ಲಿ ಹಜರತ್ ಜಾಝೈಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ರೋಹಿತ್ ಶರ್ಮಾ, ಮುಜಿಬ್ ಉರ್ ರೆಹಮಾನ್ ಬೌಲಿಂಗ್ ನಲ್ಲಿ ಕೇವಲ 1 ರನ್ ಗಳಿಗೆ ಔಟ್ ಆಗುವ ಮೂಲಕ ಆರಂಭಿಕ ಆಘಾತ ನೀಡಿದರು.ಇಂಡಿಯಾವನ್ನು 224ಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಭಾರತ ನೀಡಿದ 225 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಅಫ್ಘಾನಿಸ್ತಾನ ಇನ್ನೂ ಒಂದು ವಿಕೆಟ್ ಬಾಕಿ ಇರುವಂತೆಯೇ 213 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ಮೊಹಮ್ಮದ್ ಶಮಿ 4, ಬೂಮ್ರಾ , ಚಾಹೆಲ್, ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಗೆಲ್ಲಲು ಪ್ರಮುಖ ಪಾತ್ರ ನಿರ್ವಹಿಸಿದರು.