ಸೆಲ್ಫೀ ಹುಚ್ಚಿಗೆ ಹಾರಿಹೋಯ್ತು ಯುವಕನ ಪ್ರಾಣ..!

Date:

ಫಾಲ್ಸ್ ಬಳಿ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ತಿಗಳರ ಪಾಳ್ಯದ ನಿವಾಸಿ ತನುಷ್(23) ಮೃತಪಟ್ಟ ಯುವಕ.

ತನುಷ್ ತನ್ನ ಸ್ನೇಹಿತರಾದ ಪುರುಷೋತ್ತಮ್, ಮನೋಜ್ ಬೈಕ್‍ನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಡಿಕೇರಿಗೆ ಪ್ರವಾಸಕ್ಕೆಂದು ತೆರಳಿದ್ದರು.ಅಲ್ಲಿಂದ ಹಾಸನದ ಸಕಲೇಶಪುರದ ಮೂಕನಮಾನೆ ಫಾಲ್ಸ್‍ಗೆ ಹೋಗಿದ್ದಾರೆ.

ಈ ವೇಳೆ ಬಂಡೆಯಿಂದ ಹರಿಯುತ್ತಿದ್ದ ನೀರಿನ ಬಳಿ ಸೆಲ್ಫೀ ತೆಗೆದುಕೊಳ್ಳಲು ಹೋದಾಗ ತನುಷ್ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮೊದಲು ಮಡೀಕೇರಿ ಪ್ರವಾಸ ಮುಗಿಸಿ ನಂತರ ಹಾಸನದ ಮೂಕನಮನೆ ಫಾಲ್ಸ್ ಗೆ ಬಂದಿದ್ದರು.

ಆದರೆ ಫಾಲ್ಸ್ ನಲ್ಲಿ ಬಂಡೆಯಿಂದ ಹರಿಯುತ್ತಿದ್ದ ನೀರಿನ ಜೋತೆ ಸೆಲ್ಪಿ ತೆಗೆದುಕೊಳ್ಳುತ್ತಿರುವಾಗ ತನುಷ್ ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ.ಈ ವೇಳೆ ಯುವಕನ ಜೊತೆ ಇದ್ದ ಸ್ನೇಹಿತರು ಆತನನ್ನು ಉಳಿಸಲು ಪ್ರಯತ್ನಿಸಿದರು ಸಾಧ್ಯವಾಗಿಲ್ಲ. ದುರಾದೃಷ್ಟವಶಾತ್ ಜಾಲಿ ಆಗಿ ಸ್ನೇಹಿತರೊಟ್ಟಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಸೆಲ್ಫಿ ಕ್ರೇಜ್‍ಗೆ ಸಾವನ್ನಪ್ಪಿದ್ದಾನೆ

ಈ ಸಂಬಂಧ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...