ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದರೂ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜಯ ಸಾಧಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ. ಕಾಂಗ್ರೆಸ್ ಮೆಚ್ಚಿಕೊಂಡಿದ್ದ ಮತಬ್ಯಾಂಕ್ ಕೈ ಕೊಟ್ಟಿರುವುದು ಇದರಿಂದ ಸ್ಪಷ್ಟವಾಗಿದೆ.
ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಅಹಿಂದ ವರ್ಗಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದರೂ ವಿಧಾನಸಭಾ ಚುನಾವಣೆಯಲ್ಲಿ ಇದು ಫಲ ನೀಡಲಿಲ್ಲ. ಲೋಕಸಭಾ ಚುನಾವಣೆಯಲ್ಲೂ ಅಹಿಂದ ವರ್ಗದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಲಭಿಸಿಲ್ಲ.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮತ್ತೆ ಅಹಿಂದ ಚಳುವಳಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆಂದು ಹೇಳಲಾಗಿದೆ. ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ಯಾವುದೇ ಸಂದರ್ಭದಲ್ಲೂ ಎದುರಾಗಬಹುದೆಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸದ್ದಿಲ್ಲದೆ ಸಿದ್ಧತೆಗಳು ನಡೆದಿವೆ ಎಂದು ಹೇಳಲಾಗಿದೆ.