ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಟಿ ರವಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಕಳೆದ ಐದಾರು ದಿನಗಳಿಂದ ರೈತ ಸಂಘದ ವತಿಯಿಂದ ನಡೆದಿರುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಮಣಿಯದೇ ಉದ್ಧಟತನ ಪ್ರದರ್ಶಿಸುತ್ತಿರುವುದು ಖಂಡನೀಯ ಎಂದಿದ್ದಾರೆ.
ಮಂಡ್ಯದಲ್ಲಿ ರೈತರು ಬೆಳೆದು ನಿಂತಿರುವ ಕಬ್ಬಿನ ಪೈರಿಗೆ ನೀರು ಬಿಡುವಂತೆ ಹಾಗೂ ಮಂಡ್ಯ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳನ್ನು ತೆರೆದು, ಕಟಾವಿಗೆ ಬಂದಿರುವ ಕಬ್ಬು ಅರೆಯಲು ಅವಕಾಶ ಕಲ್ಪಿಸುವಂತೆ ಕೆಲವು ದಿನಗಳಿಂದಲೂ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ, ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಆಂತರಿಕ ಕಚ್ಚಾಟ ಮತ್ತು ಮುಖ್ಯಮಂತ್ರಿಗಳ ದರ್ಪದ ಆಡಳಿತದಲ್ಲಿ ರೈತರ ಬೇಡಿಕೆಗೆ ಸ್ಪಂದಿಸುವವರು ಯಾರೂ ಇಲ್ಲದಂತಾಗಿದೆ.
ರಾಜ್ಯದ ಜನರ ಪಾಲಿಗೆ ಸರ್ಕಾರ ಇದ್ದೂ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆ ಕಿಡಿಕಾರಿದ್ದಾರೆ.