ನನ್ನ ಗ್ರಾಮ ವಾಸ್ತವ್ಯ ಬಿಜೆಪಿಗೆ ನುಂಗಲಾರದ ತುಪ್ಪವಾಗಿದೆ ಎಂದು ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ವ್ಯಂಗ್ಯ ಮಾಡಿದ್ದಾರೆ .

Date:

ಉಜಳಂಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀಕೆ ಮಾಡುವವರಿಗೆಲ್ಲಾ ಉತ್ತರ ಕೊಡಲ್ಲ. ಪ್ರತಿಯೊಬ್ಬರ ನೋವಿಗೆ ಸ್ಪಂದಿಸಿದಾಗ ತೃಪ್ತಿ ಆಗುತ್ತೆ, ಮೂರು ಕಡೆ ಗ್ರಾಮ ವಾಸ್ತವ್ಯ ಮಾಡಿದ್ದೇವೆ, ಜನತಾ ದರ್ಶನದಿಂದ ಜನಸಾಮಾನ್ಯರಿಗೆ ಲಾಭವಾಗಲಿದೆ. ಮುಖ್ಯಮಂತ್ರಿ ಕಚೇರಿಯೇ ಜನತೆಗೆ ನೇರವಾಗಿ ಸ್ಪಂದಿಸಲಿದೆ. ಬಿಜೆಪಿ ಟೀಕೆಗೆ ಉತ್ತರ ಕೊಡುವ ಅಗತ್ಯವಿಲ್ಲ, ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಸೂಕ್ತ ನನ್ನ ಗ್ರಾಮ ವಾಸ್ತವ್ಯ ಬಿಜೆಪಿಗೆ ನುಂಗಲಾರದ ತುಪ್ಪವಾಗಿದೆ.

ಅವರ ಪಾಡಿಗೆ ಅವರು ಪ್ರತಿಭಟನೆ ಮಾಡಲಿ, ನನ್ನ ಪಾಡಿಗೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ ತಮ್ಮ ವಿದೇಶ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ ಅವರು, ಆದಿಚುಂಚನಗಿರಿ ಶ್ರೀಗಳು ನ್ಯೂಜೆರ್ಸಿಯಲ್ಲಿ ದೇಗುಲ ಕಟ್ಟಿಸುತ್ತಿದ್ದಾರೆ. ಶಂಕುಸ್ಥಾಪನೆಗೆ ನಾನೇ ಬರಬೇಕೆಂದು ಶ್ರೀಗಳು ಒತ್ತಾಯ ಮಾಡ್ತಿದ್ದಾರೆ. ನಾನೇನೂ ಸರ್ಕಾರದ ವೆಚ್ಚದಲ್ಲಿ ಹೋಗುತ್ತಿಲ್ಲ. ಅಮೇರಿಕಕ್ಕೆ ನನ್ನ ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...