No menu items!
9.6 C
Munich
Tuesday, April 21, 2026

ಬಾದಾಮಿಯಲ್ಲಿ ಮಹಿಳೆಗೆ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ .

Must read

ಬಾದಾಮಿ ಕ್ಷೇತ್ರದ ನಿಲುವಿಗೆ ಗ್ರಾಮದ ನಿವಾಸಿ ಲಕ್ಕವ್ವ ಗಾರವಾಡ ಪತಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು. ಇದುವರೆಗೂ ಪರಿಹಾರ ಬಾರದ ಹಿನ್ನೆಲೆಯಲ್ಲಿ ಮಹಿಳೆ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದಿದ್ದರು. ಈ ವೇಳೆ ಸಿದ್ದರಾಮಯ್ಯ ಸರ್ಕಾರದಿಂದ ಸಿಗಬೇಕಾದ ಸೌಲಭ್ಯವನ್ನು ಆದಷ್ಟು ಬೇಗ ಕಲ್ಪಿಸೋದಾಗಿ ಮಹಿಳೆಗೆ ಭರವಸೆ ನೀಡಿದ್ದಾರೆ.

ಇನ್ನು ನಿನ್ನೆ ಬಾದಾಮಿಯ ಆಲೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಬಾದಾಮಿಯಿಂದ 9 ಸಾವಿರ ಲೀಡ್ ಹೋಗಿದೆ. ಬಿಜೆಪಿಯವರು ಏನು ಕೆಲಸ ಮಾಡಿದ್ದಾರೆ ಎಂದು ಅವರಿಗೆ ವೋಟ್ ಹಾಕುತ್ತೀರಾ ಎಂದು ನನಗೆ ಗೊತ್ತಾಗಲಿಲ್ಲ.ಅಭಿವೃದ್ಧಿ ಕೆಲಸ ಮಾಡಿದರೂ ನಮಗೆ ವೋಟ್ ಹಾಕುವುದಿಲ್ಲ. ಹೀಗೆ ಯಾಕೆ ಮಾಡುತ್ತೀರಿ ಎಂದು ಪ್ರಶ್ನಿಸಿ ಜನರಲ್ಲಿ ಅಸಮಾಧಾನ ಹೊರ ಹಾಕಿದ್ದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article