ಕುಣಿಗಲ್ : ಇನೋವಾ ಕಾರಿನಲ್ಲಿ 8 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಅರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 13 ವರ್ಷದ ಮಗು ಹಾಗೂ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನೋವಾ ಕಾರು ಪಲ್ಟಿಯಾಗಿದೆ.
ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.