ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಿಎಂ ಪ್ರಸ್ತಾಪಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ ಅವರ ಬಳಿ ಅಸಮಾಧಾನದ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ.
ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ, ದೇವೇಗೌಡರು ಮತ್ತು ಸಿಎಂ ಕುರಿತಾಗಿ ಲಘುವಾಗಿ ಹೇಳಿಕೆ ನೀಡಿದ್ದರು. ಸಮುದಾಯದ ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ನೀಡಿದ್ರೆ ಸಿಎಂ ಕುಮಾರಸ್ವಾಮಿ ಗೊಟಕ್ ಅಂತಾರೆ ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸಿಎಂ, ಸತೀಶ್ ಜಾರಕಿಹೊಳಿ ಬಳಿ ಮಾತನಾಡಿದ್ದಾರೆ.
ಪ್ರತಿಭಟನೆ ಮಾಡಲು ಅಭ್ಯಂತರವೇನು ಇಲ್ಲ. ನಾವು ಈ ಬೇಡಿಕೆ ಈಡೇರಿಸಲು ಬದ್ಧವಾಗಿದ್ದೇವೆ. ಆದರೆ, ಸ್ವಾಮೀಜಿಯವರು ಬಳಸಿದ ಪದ ಸರಿಯಿಲ್ಲ. ನಮಗೂ ಸಮುದಾಯದ ಬಗ್ಗೆ ಕಾಳಜಿ ಇದೆ. ಒಂದೇ ದಿನಕ್ಕೆ ಎಲ್ಲವನ್ನೂ ಬಗೆಹರಿಸಲು ಸಾಧ್ಯವಿಲ್ಲ. ಕಾನೂನಿನ ಅಡಿಯಲ್ಲಿ ಕೆಲಸ ಮಾಡಬೇಕಿದೆ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ