ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅಮೆರಿಕಾಗೆ ತೆರಳಿದ್ದಾರೆ.ನ್ಯೂಜೆರ್ಸಿಗೆ ಕುಮಾರಸ್ವಾಮಿಯವರು ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸ್ಥಳೀಯ ಕನ್ನಡಿಗರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
10 ದಿನಗಳ ಕಾಲ ಕುಮಾರಸ್ವಾಮಿಯವರು ಅಮೆರಿಕಾದಲ್ಲಿ ವಾಸ್ತವ್ಯ ಹೂಡಲಿದ್ದು, ನ್ಯೂಜೆರ್ಸಿಯಲ್ಲಿನ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಕಾಲಭೈರವೇಶ್ವರ ದೇವಸ್ಥಾನ ಕಾಮಗಾರಿಗೆ ಜೂನ್ 30 ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜುಲೈ 4 ರಂದು ಅಮೆರಿಕ ಒಕ್ಕಲಿಗರ ಪರಿಷತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜುಲೈ 7 ರಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.