ಸಮ್ಮಿಶ್ರ ಸರ್ಕಾರಕ್ಕೆ ಇದ್ದ ಆತಂಕ ನಿವಾರಣೆಯಾಗಿ ಎಲ್ಲವೂ ಸರಿ ಹೋಯ್ತು ಎನ್ನುವಷ್ಟರಲ್ಲಿ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಜಿಂದಾಲ್ ಗೆ ಭೂಮಿ ಪರಭಾರೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಜಿಂದಾಲ್ ಗೆ ಭೂಮಿ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅವರು ಶಾಸಕ ಸ್ಥಾನ ಹೋದರೂ ಚಿಂತೆಯಿಲ್ಲ, ಜಿಂದಾಲ್ ವಿರುದ್ಧ ಹೋರಾಟ ಮುಂದುವರೆಸುತ್ತೇನೆ ಎಂದು ಘೋಷಿಸಿದ್ದರು.
ಜಿಂದಾಲ್ ವಿಚಾರಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದರೂ, ಇದರ ಹಿಂದೆ ಆಪರೇಷನ್ ಕಮಲ ನಡೆದಿರುವ ಸಾಧ್ಯತೆ ಇದೆ. ಬಿಜೆಪಿ ನಾಯಕರ ಕೈವಾಡದ ಭಾಗವಾಗಿಯೇ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಲ್ಲಿ ಅತೃಪ್ತರು, ಅಸಮಾಧಾನಿತ ಹಲವು ಶಾಸಕರು ಇದ್ದು, ಅವರೆಲ್ಲಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ.ಇದರ ಮೊದಲ ಭಾಗವಾಗಿ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.