ಆಪರೇಷನ್ ಕಮಲಕ್ಕೆ ರಿವರ್ಸ್ ಆಪರೇಷನ್ ಮಾಡ್ತೀವಿ ಎಂದ್ರು ಸತೀಶ್ ಜಾರಕಿಹೊಳಿ ! ಯಾಕೆ ಗೊತ್ತಾ?

Date:

ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡುತ್ತೇವೆ ಎಂದು ಅರಣ್ಯ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಅವರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಆನಂದ್ ಸಿಂಗ್ ಅವರು, ಜಿಂದಾಲ್‍ಗೆ ಭೂಮಿ ಪರಭಾರೆ ವಿಷಯಕ್ಕೆ ರಾಜೀನಾಮೆ ಕೊಟ್ಟಿರಬಹುದು. ರಾಜೀನಾಮೆ ಕೊಡುವುದರಿಂದ ಪರಿಹಾರ ಸಿಗುವುದಿಲ್ಲ. ಈ ಬಗ್ಗೆ ಸರ್ಕಾರ ಗಮನ ಹರಿಸುತ್ತದೆ ಎಂದು ಹೇಳಿದರು. ಅವರು ರಾಜೀನಾಮೆ ಕೊಟ್ಟರೂ ಯೋಚಿಸಿ ನಿರ್ಧಾರ ಕೈಗೊಳ್ಳಲು 15 ದಿನಗಳ ಕಾಲಾವಕಾಶವಿರುತ್ತದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಸುಭದ್ರವಾಗಿದೆ.ಯಾರಿಂದಲೂ ಕೆಡವಲು ಸಾಧ್ಯವಿಲ್ಲ. ಈಗಾಗಲೇ 12 ಮಂದಿ ಮುಂಬೈಗೆ ಹೋಗಿ ಬರಿಗೈನಲ್ಲಿ ಹಿಂತಿರುಗಿದ್ದಾರೆ. ನಮ್ಮ ಸರ್ಕಾರ 4 ವರ್ಷ ಭದ್ರವಾಗಿರುತ್ತದೆ. ಯಾರಿಂದಲೂ ಏನೂ ಮಾಡಲು ಆಗುವುದಿಲ್ಲ ಎಂದರು.

7 ಮಂದಿ ಅತೃಪ್ತರು ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲವೆಂದು ಸ್ಥಳದಲ್ಲೇ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರಿಗೆ ದೂರವಾಣಿಯಲ್ಲಿ ಮಾತನಾಡಿ ಖಚಿತ ಪಡಿಸಿಕೊಂಡರು.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...