ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಸಹೋದರರ ನಡುವೆ ಸವಾಲ್ ಎದುರಾಗಲಿದೆ.
ಕಾಂಗ್ರೆಸ್ ಭದ್ರಕೋಟೆಯಾಗಿರುವ ಗೋಕಾಕ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಚಿವ ಸತೀಶ್ ಜಾರಕಿಹೊಳಿ ಮತ್ತೊಬ್ಬ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲಿದ್ದಾರೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಿಂದ ದೂರವಾದ ಬಳಿಕ ಈ ಕ್ಷೇತ್ರದಲ್ಲಿ ಲಖನ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಬಹುತೇಕ ಬಿಜೆಪಿ ಅಭ್ಯರ್ಥಿಯಾಗಲಿದ್ದು, ಅವರಿಗೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಸಲಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರವಾದಲ್ಲಿ ಗೋಕಾಕ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈ ಕ್ಷೇತ್ರದಲ್ಲಿ ಸಹೋದರರ ನಡುವೆ ಸ್ಪರ್ಧೆ ನಡೆಯುವುದು ನಿಶ್ಚಿತವಾಗಿದೆ.