ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಆನಂದ್ ಸಿಂಗ್ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಜಿಂದಾಲ್ ಪ್ರಕರಣದ ಬಗ್ಗೆ ನನ್ನ ಬಳಿ ಏನೂ ಮಾತನಾಡಿಲ್ಲ. ಬಿಜೆಪಿ ಹೈಕಮಾಂಡ್ ಮೂಲಕ ಆಪರೇಷನ್ ಕಮಲ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ಮೂಲಕ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಸುತ್ತಿದೆ. ಆದರೆ, ಬಿಜೆಪಿಯೊಳಗೆ ಎಲ್ಲವೂ ಸರಿಯಾಗಿಲ್ಲ. ಅಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ಕೆಲವು ಬಿಜೆಪಿ ಶಾಸಕರು ನಮ್ಮ ಬಳಿಯೇ ಹೇಳಿಕೊಂಡಿದ್ದಾರೆ ಎಂದರು.