ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಪರ ರೋಹಿತ್ ಶರ್ಮಾ ಭರ್ಜರಿ ಶತಕ (104) ಹಾಗೂ ಕೆ.ಎಲ್. ರಾಹುಲ್ ಆಕರ್ಷಕ ಅರ್ಧಶತಕ (77) ನೆರವಿನಿಂದ ಭಾರತ 50 ಓವರ್ ಗಳಲ್ಲಿ 314 ರನ್ ಗಳಿಸಿತು.
ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡಕ್ಕೆ ಶಕಿಬ್ ಅಲ್ ಹಸನ್ (66) ಹಾಗೂ ಮೊಹಮ್ಮದ್ ಸೈಫುದ್ಧೀನ್ (51) ಹೋರಾಟದ ಹೊರತಾಗಿಯೂ 286 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನ ಮೂಲಕ ಭಾರತ ಅಂತಿಮ ನಾಲ್ಕರ ಘಟಕ್ಕೆ ಪ್ರವೇಶಿಸಿದ ಎರಡನೇ ತಂಡವೆಂಬ ಗೌರವಕ್ಕೆ ಪಾತ್ರವಾಗಿದೆ.ಭಾರತ ಆಡಿರುವ ಎಂಟು ಪಂದ್ಯಗಳಲ್ಲಿ ಆರು ಗೆಲುವು ಹಾಗೂ ತಲಾ ಒಂದು ಸೋಲುಉ ಹಾಗೂ ಡ್ರಾ ಫಲಿತಾಂಶದೊಂದಿಗೆ ಒಟ್ಟು 13 ಅಂಕಗಳನ್ನು ಕಲೆ ಹಾಕಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಉಳಿದುಕೊಂಡಿದೆ.