ಜೆಡಿಎಸ್ ನಿರ್ಗಮಿತ ಅಧ್ಯಕ್ಷ ಹೆಚ್. ವಿಶ್ವನಾಥ್ ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಗುವಾಹತಿಯ ಕಾಮಾಕ್ಯ ಮಂದಿರಕ್ಕೆ ತೆರಳಿದ್ದ ಹೆಚ್. ವಿಶ್ವನಾಥ್ ಅವರು, ಇಂದು ನವದೆಹಲಿಗೆ ಆಗಮಿಸಿದ್ದು, ಈ ವೇಳೆ ಕರ್ನಾಟಕ ಭವನದಲ್ಲಿ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ ಸುದೀರ್ಘ ಕಾಲ ಮಾತುಕತೆ ನಡೆಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್. ವಿಶ್ವನಾಥ್, ಕಳೆದ ಕೆಲ ದಿನಗಳಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ದ ಪರೋಕ್ಷವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದು, ಅವರ ಮುಂದಿನ ನಡೆ ಏನು ಎಂಬುದು ಈಗ ಕುತೂಹಲ ಮೂಡಿಸಿದೆ.