No menu items!
9.6 C
Munich
Tuesday, April 21, 2026

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ ಎಂದ್ರು ಸಿದ್ದರಾಮಯ್ಯ ! ಹೌದ ?

Must read

ಸಚಿವ ಸ್ಥಾನಕ್ಕಾಗಿ ಆನಂದ್ ಸಿಂಗ್ ಅವರು ರಾಜೀನಾಮೆ ನೀಡಿಲ್ಲ. ಬದಲಿಗೆ ಜಿಂದಾಲ್ ವಿಚಾರವಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಅವರು ಒಬ್ಬರೇ ರಾಜೀನಾಮೆ ನೀಡಿರುವುದು, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ. ಈ ವಿಚಾರವನ್ನು ಸ್ಪೀಕರ್ ಕೂಡ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವ ರಾಜೀನಾಮೆ ಲೆಟರ್‍ಹೆಡ್ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಆನಂದ್ ಸಿಂಗ್ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.ಸದ್ಯಕ್ಕೆ ಸಮನ್ವಯ ಸಮಿತಿ ಸಭೆಯನ್ನು ಕರೆಯಲು ಸಂದರ್ಭ ಬಂದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಜಿಟಿಡಿ ಅವರು ಆಪರೇಷನ್ ಕಮಲ ಮಾಡುತ್ತಿಲ್ಲ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಆತನಿಗೆ ಆ ಬಗ್ಗೆ ಆ ರೀತಿಯ ಮಾಹಿತಿ ಇರಬಹುದು. ಆದರೆ ಬಿಜೆಪಿಯವರೇ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಹೇಳಿದರು

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article