ಲೋಕಸಭೆ ಚುನಾವಣೆಯ ಸೋಲಿನ ಜವಾಬ್ದಾರಿ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಅಧಿಕೃತವಾಗಿ ರಾಜೀನಾಮೆ ನೀಡಿದ ಅವರು, ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ನಿಮ್ಮ ನಿರ್ಧಾರಕ್ಕೆ ಅತೀವ ಗೌರವ ಸೂಚಿಸುತ್ತೇನೆ. ಕೆಲವರಲ್ಲಿ ಮಾತ್ರ ಇಂತಹ ಗಟ್ಟಿತನದ ನಿರ್ಧಾರವನ್ನು ಪ್ರಕಟಿಸುವ ಧೈರ್ಯವಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ರಾಹುಲ್ ಗಾಂಧಿಯನ್ನು ಅನೇಕ ಕಾಂಗ್ರೆಸ್ ನಾಯಕರು ಭೇಟಿಯಾಗಿ ಮನವೊಲಿಸುವ ಪ್ರಯತ್ನ ನಡೆಸಿದ್ದರು.ಆದರೆ ರಾಹುಲ್ ಗಾಂಧಿ ಮಾತ್ರ ತಮ್ಮ ನಿರ್ಧಾರವನ್ನು ಬದಲಾಯಿಸಿದರೆ ನಿನ್ನೆ ಅಧಿಕೃತವಾಗಿ ರಾಜೀನಾಮೆ ನೀಡಿದರು.